'ಸಂಪುಟ ವಿಸ್ತರಣೆ ಬಳಿಕ ಬಿಜೆಪಿಯಲ್ಲಿ ಬಂಡಾಯ ಸ್ಫೋಟ' - kalburgi
ಕಲಬುರಗಿ: ಸಚಿವ ಸಂಪುಟ ವಿಸ್ತರಣೆ ಬಳಿಕ ಬಿಜೆಪಿಯಲ್ಲಿ ಬಂಡಾಯ ಸ್ಪೋಟ ಗ್ಯಾರಂಟಿ ಎಂದು ಶಾಸಕ ಅಜಯ್ ಸಿಂಗ್ ಮತ್ತು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಸಾಕಷ್ಟು ಅಸಮಾಧಾನ ಇದೆ. ಸಾಕಷ್ಟು ಗುಂಪುಗಾರಿಕೆ ನಡೆಯುತ್ತಿದೆ. ಸಂಜೆ ಬಿಜೆಪಿಯಲ್ಲಿ ಏನಾಗುತ್ತೆ ಅಂತಾ ನೀವೇ ನೋಡಿ. ಅಸಮಾಧಾನ ಸ್ಫೋಟ ಆಗೋ ಮಾಹಿತಿಯಿದ್ದು, ಸಂಜೆ ಬಳಿಕ ಎಲ್ಲವೂ ಸ್ಪಷ್ಟವಾಗಲಿದೆ ಎಂದಿದ್ದಾರೆ.