ಹತ್ತು ದಿನಗಳ ಕಾಲ ಪುನಃ ಲಾಕ್‌ಡೌನ್ ಮಾಡುವುದು ಸೂಕ್ತ.. ಶಾಸಕ ಅಪ್ಪಚ್ಚು ರಂಜನ್ - ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ
ಕೊರೊನಾ ಸೋಂಕಿನ ಸರಪಳಿ ತುಂಡರಿಸಲು ಹತ್ತು ದಿನಗಳ ಲಾಕ್‌ಡೌನ್ ಮಾಡುವುದು ಸೂಕ್ತ ಎಂದು ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿನ ತೀವ್ರತೆ ಹೆಚ್ಚುತ್ತಿದೆ. ಹತ್ತು ದಿನ ರಾಜ್ಯದಾದ್ಯಂತ ಪುನಃ ಲಾಕ್‌ಡೌನ್ ಘೊಷಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಹಾಗೆಯೇ ಸದ್ಯಕ್ಕೆ ಶಾಲಾ-ಕಾಲೇಜುಗಳನ್ನು ತೆರೆಯುವುದು ಸರಿಯಲ್ಲ. ಹಿಂದೆಲ್ಲ ಪೋಷಕರಿಗೆ ನಾಲ್ಕೈದು ಮಕ್ಕಳಿರುತ್ತಿದ್ದರು. ಆದರೆ, ಪ್ರಸ್ತುತ ಒಬ್ಬರೇ ಮಕ್ಕಳನ್ನು ಹೊಂದಿದ್ದಾರೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಶೀಘ್ರ ಶೈಕ್ಷಣಿಕ ಚಟುವಟಿಕೆಗಳನ್ನು ಶುರು ಮಾಡುವುದು ಸೂಕ್ತವಲ್ಲ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.