ಕರ್ನಾಟಕ

karnataka

ETV Bharat / videos

ಬಿಜೆಪಿಯಿಂದ ತುಮಕೂರು ಜಿಲ್ಲೆಯಲ್ಲಿ ತೃಪ್ತಿಕರ ಕಾರ್ಯಕ್ರಮಗಳ ಅನುಷ್ಠಾನ: ಶಾಸಕ ಜ್ಯೋತಿ ಗಣೇಶ್​​​ - tumakuru latest news

By

Published : Nov 2, 2019, 4:10 PM IST

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ತುಮಕೂರು ಜಿಲ್ಲೆಯ ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೆ ತಾರತಮ್ಯವಿಲ್ಲದೆ ಅನುದಾನ ಬಿಡುಗಡೆಯಾಗಿದೆ. ಸರಾಸರಿಯಾಗಿ ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಸ್ವಲ್ಪ ಮಟ್ಟಿಗೆ ಹೆಚ್ಚಿನ ಅನುದಾನ ಲಭಿಸಿದೆ. ಈ ಹಿಂದಿನ ಸರ್ಕಾರಗಳಲ್ಲಿ ತುಮಕೂರು ಜಿಲ್ಲೆಗೆ ಹೇಮಾವತಿ ನದಿ ನೀರು ಹಂಚಿಕೆಯಲ್ಲಿ ಅನ್ಯಾಯವಾಗುತ್ತಿತ್ತು. ಆದರೆ, ಯಡಿಯೂರಪ್ಪ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ತುಮಕೂರು ಜಿಲ್ಲೆಗೆ ನೀರಾವರಿ ವಿಷಯದಲ್ಲಿ ತೃಪ್ತಿಕರವಾದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಹೇಳಿದ್ದಾರೆ.

ABOUT THE AUTHOR

...view details