ಕರ್ನಾಟಕ

karnataka

ETV Bharat / videos

ಶಾಲಾ-ಕಾಲೇಜು ಓಪನ್.. ಸರ್ಕಾರಿ ಶಾಲೆಗಳಿಗೆ ಶಾಸಕ ಎನ್. ಮಹೇಶ್ ಭೇಟಿ

By

Published : Jan 1, 2021, 3:49 PM IST

ಇಂದಿನಿಂದ ಶಾಲಾ- ಕಾಲೇಜುಗಳು ಆರಂಭಗೊಂಡಿದ್ದು, ಸ್ಥಳೀಯ ಶಾಸಕ ಎನ್. ಮಹೇಶ್ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದರು. ನಗರದ ಎಸ್.ವಿ.ಕೆ.ಕಾಲೇಜು, ಮುಡಿಗುಂಡದ ಸರ್ಕಾರಿ ಪ್ರೌಢ ಶಾಲೆ ಹಾಗೂ ಸೂರಾಪುರ ಗ್ರಾಮದ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿದ ಶಾಸಕರು, ಕೋವಿಡ್ ಭೀತಿಯಿರುವುದರಿಂದ ಮಕ್ಕಳ ಸುರಕ್ಷತೆ ಬಹಳ ಮುಖ್ಯವಾಗಿರುತ್ತದೆ. ಆದ್ದರಿಂದ ಸರ್ಕಾರದ ಅಧಿಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅಧಿಕಾರಿಗಳು ಹಾಗೂ ಶಾಲಾ ಆಡಳಿತ ಮಂಡಳಿಗೆ ಸೂಚನೆ ನೀಡಿದರು. ಶಾಲೆಗಳಲ್ಲಿ ಇಂದು ಹಬ್ಬದ ವಾತಾವರಣ ಕಂಡು ಬಂದಿದ್ದು, ತಳಿರು ತೋರಣಗಳಿಂದ ಸಿಂಗರಿಸಿ, ಶಾಲಾ- ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ಹೂ ನೀಡಿ ಶಾಲೆಗೆ ಬರಮಾಡಿಕೊಳ್ಳಲಾಗಿದೆ.

ABOUT THE AUTHOR

...view details