ಮೇಯರ್ ಯಾರಾಗುತ್ತಾರೆ ಎಂದು ಕಾದು ನೋಡಿ: ಶಾಸಕ ತನ್ವೀರ್ ಸೇಠ್ - ಮೈಸೂರು ಮಹಾನಗರ ಪಾಲಿಕೆಯಲ್ಲಿ ಯಾರು ಮೇಯರ್
ಮೈಸೂರು: ಮಹಾನಗರ ಪಾಲಿಕೆಯಲ್ಲಿ ಯಾರು ಮೇಯರ್ ಆಗುತ್ತಾರೆ ಎಂಬುದನ್ನು ಫೆ.24ರ ವರೆಗೆ ಕಾದುನೋಡಿ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಇಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಅವರ ಮನೆಯಲ್ಲಿ ಭೇಟಿ ಮಾಡಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ತನ್ವೀರ್ ಸೇಠ್, ನಾಳೆ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಪಾಲಿಕೆ ಸದಸ್ಯರ ಸಭೆ ನಡೆಯಲಿದೆ. ಈ ಬಾರಿ ನಾವು ಕೋಮುವಾದಿ ಶಕ್ತಿಯನ್ನು ದೂರ ಇಡಲು ಮುಂದಾಗಿದ್ದೇವೆ, ಇದಕ್ಕಾಗಿ ಜಾತ್ಯತೀತರು ಸೇರಿ ಅಧಿಕಾರ ಹಿಡಿಯುತ್ತೇವೆ ಎಂದರು.