ಮೈಸೂರಲ್ಲಿ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಅಶ್ವಿನ್ ಕುಮಾರ್ರಿಂದ ಮತದಾನ - ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ
ಗ್ರಾ.ಪಂಚಾಯಿತಿಯ ಎರಡನೇ ಹಂತದ ಚುನಾವಣೆಯಲ್ಲಿ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಅಶ್ವಿನ್ ಕುಮಾರ್ ತಮ್ಮ ಗ್ರಾಮಗಳಲ್ಲಿ ಮತದಾನ ಮಾಡಿದರು. ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸಿದ್ಧರಾಮನಹುಂಡಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮತದಾನ ಮಾಡಿದರೆ, ಟಿ.ನರಸೀಪುರ ತಾಲೂಕಿನ ಶಾಸಕ ಅಶ್ವಿನ್ ಕುಮಾರ್ ಅವರು ಕುಟುಂಬ ಸಮೇತರಾಗಿ ಆಗಮಿಸಿ ತುಂಬಲ ಗ್ರಾಮ ಪಂಚಾಯತಿಯ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.