ಕರ್ನಾಟಕ

karnataka

ETV Bharat / videos

ಸಿಬಿಐ ವಶಕ್ಕೆ ವಿನಯ ಕುಲಕರ್ಣಿ: ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಮಾನೆ ಭೇಟಿ - Srinivas Mane latest news

By

Published : Nov 5, 2020, 11:21 AM IST

ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐ ವಶಕ್ಕೆ ಪಡೆದ ಹಿನ್ನೆಲೆ ಧಾರವಾಡ ಉಪನಗರ ಪೊಲೀಸ್ ಠಾಣೆಗೆ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಭೇಟಿ ನೀಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಸಕ್ರೀಯವಾಗಿರುವ ಹಾಗೂ ಪ್ರಭಾವಿ ನಾಯಕ ವಿನಯ ಕುಲಕರ್ಣಿ ವಿರುದ್ಧ ಬಿಜೆಪಿ ಹೂಡಿದ ಅಸ್ತ್ರವಿದು. ಕೊಲೆಯ ನಿಜವಾದ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಿ ಎಂದು ಅವರು ಆಗ್ರಹಿಸಿದರು. ರಾಜಕೀಯ ದ್ವೇಷ ಬೇಡ. ಸಿಬಿಐ ತನಿಖೆ ಮಾಡುತ್ತಿದ್ದು, ನಾವು ಸಹಕಾರ ನೀಡುತ್ತೇವೆ. ಆದರೆ, ಈ ಪ್ರಕರಣದಲ್ಲಿ ವಿನಯ ಕುಲಕರ್ಣಿ ಅವರ ಪಾತ್ರವಿಲ್ಲ. ಅವರು ಸಂಪೂರ್ಣವಾಗಿ ಆರೋಪ ಮುಕ್ತವಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ. ಅವರಿಗೆ ಆತ್ಮಸ್ಥೈರ್ಯ ತುಂಬಲು ನಾವು ಇಲ್ಲಿಗೆ ಬಂದಿದ್ದೇವೆ ಎಂದು ತಿಳಿಸಿದರು.

ABOUT THE AUTHOR

...view details