ನರೇಂದ್ರ ಮೋದಿ ಅಲೆಯೇ ಗೆಲುವಿಗೆ ಕಾರಣ ಎಂದ ರಾಜಾ ಅಮರೇಶ್ವರ ನಾಯಕ - ಲೋಕಸಭೆ
ಪರಿಶಿಷ್ಟ ಪಂಗಡಕ್ಕೆ ಮೀಸಲು ಆಗಿರುವ ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕೈ ಪಕ್ಷದ ಭದ್ರಕೋಟೆಯಾಗಿರುವ ರಾಯಚೂರು ಲೋಕಸಭೆ ಕ್ಷೇತ್ರವನ್ನು ಕೇಸರಿ ಪಡೆ ತನ್ನ ವಶಕ್ಕೆ ಪಡೆಯುವ ಮೂಲಕ ವಿಜಯ ಸಾಧಿಸಿದೆ. ಜಿಲ್ಲಾ ಚುನಾವಣಾಧಿಕಾರಿಯಿಂದ ಅಧಿಕೃತವಾಗಿ ಪ್ರಮಾಣ ಪತ್ರ ಸ್ವೀಕರಿಸಿದ ಬಳಿಕ ಈಟಿವಿ ಭಾರತ್ನೊಂದಿಗೆ ಮಾತನಾಡಿದ ಅಮರೇಶ್ವರ, ಮೋದಿಯ ಅಲೆ ನನ್ನ ಗೆಲುವಿಗೆ ಕಾರಣವೆಂದು ತಿಳಿಸಿದ್ದಾರೆ.