ಕಾಂಗ್ರೆಸ್ನಿಂದ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಹಣ ಹಂಚಿಕೆ ಆರೋಪ: ವಿಡಿಯೋ ವೈರಲ್ - Muski by-election
ರಾಯಚೂರು: ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಹಣ ಹಂಚಿಕೆ ಜೋರಾಗಿದೆ. ಈ ಹಿಂದೆ ಬಿಜೆಪಿ ಹಣ ಹಂಚಿದೆ ಎನ್ನಲಾದ ವಿಡಿಯೋ ವೈರಲ್ ಆಗಿತ್ತು. ಇದೀಗ ಕಾಂಗ್ರೆಸ್ ಕಾರ್ಯಕರ್ತರು ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿಂಧನೂರು ತಾಲೂಕಿನ ತುರುವಿಹಾಳ ಗ್ರಾಮದ ಮನೆ-ಮನೆಗೆ ತೆರಳಿ ಚೀಟಿ ಹಂಚುವ ನೆಪದಲ್ಲಿ ಹಣ ಕೊಡ ಹಂಚಲಾಗುತ್ತಿದೆ ಎನ್ನಲಾದ ದೃಶ್ಯವೊಂದನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.