ಮಂಗನ ಅಂತ್ಯಕ್ರಿಯೆ ಮಾಡಿದ ಶಾಲಾ ವಿದ್ಯಾರ್ಥಿಗಳು!
ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ನಾಗೇನಹಳ್ಳಿ ಶಾಲಾ ಮಕ್ಕಳು ಇಂದು ಬೆಳಗ್ಗೆ ಶಾಲೆಗೆ ಹೋಗಲು ರಸ್ತೆಯಲ್ಲಿ ನಡೆದು ಕೊಂಡು ಬರುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಹತ್ತಿದ್ದ ಕೋತಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದನ್ನು ನೋಡಿದ ವಿದ್ಯಾರ್ಥಿಗಳು ಮಂಗನ ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.