ಮುನಿರತ್ನಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಮಗೂ ಬೇಸರವಿದೆ: ಸಚಿವ ಎಂಟಿಬಿ ನಾಗರಾಜ್ - ಮುನಿರತ್ನ
ಮುನಿರತ್ನರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಮಗೂ ಬೇಸರವಿದೆ. ಕೆಲವು ಕಾರಣಾಂತರಗಳಿಂದ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ ಎಂದು ಪ್ರಮಾಣ ವಚನ ಸ್ವೀಕರಿಸಿರುವ ನೂತನ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಮುನಿರತ್ನರಿಗೆ ಸಚಿವ ಸ್ಥಾನ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಖಾತೆ ಹಂಚಿಕೆ ಕುರಿತು ಪ್ರತಿಕ್ರಿಯಿಸಿ, ನಮಗೆ ಯಾವುದಾದರು ಒಳ್ಳೆಯ ಖಾತೆ ನೀಡುವುದಾಗಿ ಹೇಳಿದ್ದಾರೆ. ಸಚಿವ ಸ್ಥಾನ ನೀಡಿರುವುದು ಸಂತಸ ತಂದಿದೆ ಎಂದಿದ್ಧಾರೆ.