ಶಿವಮೊಗ್ಗ: ಸರ್ಕಾರಿ ನೌಕರರಿಗೆ ಸಂಗೀತ ರಸದೌತಣ.. - Music Program
ಶಿವಮೊಗ್ಗ: ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಸರ್ಕಾರಿ ನೌಕರರಿಗಾಗಿ ಸೋಮವಾರ ಸಂಜೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಂಗೀತ ಸಂಜೆ ಕಾರ್ಯಕ್ರಮವನ್ನು ನಗರದ ನೆಹರೂ ಕ್ರೀಡಾಂಗಣದ ಆವರಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸರಿಗಮಪ ಖ್ಯಾತಿಯ ಗಾಯಕ, ಗಾಯಕಿಯರು ಸುಮಧುರ ಗೀತೆಗಳನ್ನು ಹಾಡಿ ಸರ್ಕಾರಿ ನೌಕರರನ್ನು ರಂಜಿಸಿದರು. ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ, ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ ಸೇರಿದಂತೆ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.