ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಮೈಸೂರು ಅರಮನೆ - ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಮೈಸೂರು ಅರಮನೆ
ಮೈಸೂರು: ವರ್ಷದ ನಂತರ ಮೈಸೂರು ಅರಮನೆ ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿದೆ. ಅರಮನೆ ವಿದ್ಯುತ್ ಬೆಳಕಿನಲ್ಲಿ ನೋಡಲು ಪ್ರವಾಸಿಗರು ಮುಗಿ ಬೀಳುತ್ತಿದ್ದಾರೆ. ಕಳೆದ ವರ್ಷ ಮಾರ್ಚ್ನಲ್ಲಿ ಪ್ರಧಾನಿ ಮೋದಿ ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿದ ದಿನದಿಂದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ, ವಿದ್ಯುತ್ ದೀಪಾಲಂಕಾರ ಸ್ಥಗಿತಗೊಳಿಸಲಾಗಿತ್ತು. ಲಾಕ್ಡೌನ್ ಸಡಿಲಗೊಂಡ ನಂತರ ಪ್ರವಾಸಿಗರಿಗೆ ಅರಮನೆ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ಆದರೆ, ವಿದ್ಯುತ್ ದೀಪಾಲಂಕಾರ ಶುರು ಮಾಡಿರಲಿಲ್ಲ. ದಸರಾ ವೇಳೆ 9 ದಿನಗಳ ಕಾಲ ವಿದ್ಯುತ್ ದೀಪಾಲಂಕಾರಗಳಿಂದ ಶೋಭಿಸಿದ ಅರಮನೆ, ಇದೀಗ ಮತ್ತೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.