ಬಿಜೆಪಿ 15 ಕ್ಷೇತ್ರದಲ್ಲಿ ಗೆಲ್ಲುತ್ತೆ ಎಂಬ ವಿಶ್ವಾಸ.. ನಳಿನ್ ಕುಮಾರ ಕಟೀಲ್ - ಹುಬ್ಬಳ್ಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಸುದ್ದಿ
ಹುಬ್ಬಳ್ಳಿ: ಉಪಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರದಲ್ಲಿ ಗೆಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾತನಾಡಿದ ಅವರು, ಎಲ್ಲಾ ಮತಕ್ಷೇತ್ರದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಉಪಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಬಿಜೆಪಿಗೆ ಆಗುತ್ತದೆ. ಉಪಚುನಾವಣೆಯಲ್ಲಿ ಬಿ ಎಸ್ ಯಡಿಯೂರಪ್ಪ ಸೋಲು ಕಾಣುವ ಪ್ರಶ್ನೆ ಇಲ್ಲ ಎಂದರು..