ಉಪಚುನಾವಣೆಗೆ ಎರಡು ದಿನದಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ: ನಳಿನ್ ಕುಮಾರ ಕಟೀಲ್ - BJP President Nalin Kumar Kateel
ಧಾರವಾಡ: ಶಿರಾ ಮತ್ತು ಆರ್ ಆರ್ ನಗರ ಉಪ ಚುನಾವಣೆಗೆ ನಾವು ಪೂರ್ಣ ತಯಾರಿ ಮಾಡಿಕೊಂಡಿದ್ದೇವೆ. ಇನ್ನೆರಡು ದಿನದಲ್ಲಿ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಜತೆ ನಾಮಪತ್ರ ಸಲ್ಲಿಸಲು ಆಗಮಿಸಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.