ನರೇಗಾ ಯೋಜನೆಯಡಿ ಇನ್ಮುಂದೆ 150 ದಿನಗಳ ಕೆಲಸ ಖಾತ್ರಿ - ballary latest news
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ಮಾನವ ದಿನಗಳ ಸೃಜನೆ ಹೆಚ್ಚಿಸಲಾಗಿದೆ. ಈ ಮೊದ್ಲು 100 ದಿನಗಳಿದ್ದು ಇದೀಗ 150 ದಿನಗಳಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನರೇಗಾ ಮಾನವ ದಿನಗಳ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಸದ್ಯ ಯೋಜನೆಯಡಿ ಕೆಲಸ ಮಾಡುವವರೆಲ್ಲರೂ 150 ದಿನಗಳೂ ಕೂಡ ಕೆಲಸ ಮಾಡಬಹುದಾಗಿದೆ ಎಂದರು. ಇನ್ನು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ನಲ್ಲಿ ಯಾವುದೇ ಅನುದಾನದ ಕೊರತೆ ಇಲ್ಲ. ವಿರೋಧ ಪಕ್ಷದವರು ಬಾಯಿಗೆ ಬಂದ ಹಾಗೆ ಮಾತನಾಡೋದು ಸರಿಯಲ್ಲ ಎಂದು ಹೇಳಿದರು.