ಪುನೀತ್ ಕುಟುಂಬಸ್ಥರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದ ಸಿಎಂ: ಅಗಲಿದ ನಟನಿಗೆ ಸರ್ಕಾರಿ ಗೌರವ ಸಲ್ಲಿಕೆ - ಪುನೀತ್ ಅಂತಿಮ ಸಂಸ್ಕಾರ
ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆ ನಡೆಯಿತು. ಪಾರ್ಥಿವ ಶರೀರಕ್ಕೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಕಣ್ಣೀರಿಡುತ್ತಲೇ ಪುನೀತ್ ಪತ್ನಿ ಅಶ್ವಿನಿಯವರು ರಾಷ್ಟ್ರಧ್ವಜ ಸ್ವೀಕರಿಸಿದರು. ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಸಕಲ ಗೌರವದೊಂದಿಗೆ ಪುನೀತ್ ರಾಜ್‍ಕುಮಾರ್ ಗೆ ಅಂತಿಮ ನಮನ ಸಲ್ಲಿಸಲಾಯಿತು.