ಕಲಬುರಗಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಣೆ - ಕಲಬುರಗಿ ಸುದ್ದಿ
ಕಲಬುರಗಿ/ ಉತ್ತರ ಕನ್ನಡ: ಹೈದರಾಬಾದ್ ಪ್ರಾಂತ್ಯದ ವಿಮೋಚನೆಗೆ ಕಾರಣಕರ್ತರಾಗಿದ್ದ ಉಕ್ಕಿನ ಮನುಷ್ಯ ಸರ್ದಾರ್ ಪಟೇಲರ ಜಯಂತಿಯನ್ನು ಕಲಬುರಗಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಹೈದರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ನೇತೃತ್ವದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಶಶೀಲ್ ನಮೋಶಿ ಮತ್ತಿತರರು ಪಟೇಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಸರ್ದಾರ್ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಇನ್ನು, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಶಿರಸಿ ನಗರದಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು,ಸಿಬ್ಬಂದಿ, ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು 3 ಕಿ.ಮೀಟರ್ವರೆಗೂ ಓಟ ನಡೆಸಿ ಏಕತೆಯನ್ನು ಪ್ರದರ್ಶಿಸಿದರು.