ಹಾವೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ - ರಾಷ್ಟ್ರೀಯ ಮತದಾರರ ದಿನಾಚರಣೆ
ಹಾವೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಗುರುಭವನದಲ್ಲಿ ಏರ್ಪಡಿಸಲಾಗಿದ್ದು, ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಮತದಾರರ ಕುರಿತ ಅಂಕಿ-ಸಂಖ್ಯೆಗಳನ್ನು ಬಿಡುಗಡೆ ಮಾಡಿ, 18 ವರ್ಷ ತುಂಬಿದ ಯುವಕ ಯುವತಿಯರು ತಮ್ಮ ಮತದಾರರ ನೋಂದಣಿ ಮಾಡಿಸಿಕೊಳ್ಳುವ ಮೂಲಕ ತಮ್ಮ ಹಕ್ಕನ್ನ ಪಡೆಯಬೇಕು ಎಂದು ತಿಳಿಸಿದರು. ಸುಭದ್ರ ಸರ್ಕಾರಕ್ಕಾಗಿ ಸರ್ವ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವ ಅವಶ್ಯಕತೆ ಇದೆ ಎಂದು ಜನತೆಗೆ ಕರೆ ನೀಡಿದರು.