ಕೋಲಾರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ - ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರ
ಇಂದು ಕೋಲಾರದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನ ಹಮ್ಮಿಕೊಳ್ಳಲಾಗಿತ್ತು. ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಭಾರತೀಯ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಉದ್ಘಾಟಿಸಿದ್ರು. ಪ್ರತಿ ಚುನಾವಣೆಯಲ್ಲಿ ಜಾತಿ, ಧರ್ಮ ಮತ ಭಾಷೆ ಎನ್ನದೇ, ಯಾವುದೇ ಆಮಿಷಗಳಿಗೆ ಒಳಗಾಗದೆ ನಿರ್ಭೀತವಾಗಿ ಮತ ಚಲಾಯಿಸಬೇಕೆಂದು ಕರೆ ನೀಡಿದರು. ಅಲ್ಲದೆ ಪ್ರತಿಯೊಬ್ಬ ಮತದಾರನು ನ್ಯಾಯ ಸಮ್ಮತವಾಗಿ, ಶಾಂತಿಯುತವಾಗಿ ಚುನಾವಣೆಗಳ ಘನತೆಯನ್ನ ಎತ್ತಿಹಿಡಿಯುವಂತೆ ಮಾಡಬೇಕೆಂದು ಹೇಳಿದ್ರು. ಪರಿಷ್ಕೃತ ಹೊಸ ಮತದಾರರ ಪಟ್ಟಿ ಸಿದ್ದವಾಗಿದ್ದು, ತಮ್ಮ ಹೆಸರು ಮತ್ತು ವಿವರವನ್ನ ಪರಿಶೀಲಿಸಿಕೊಳ್ಳುವಂತೆ ತಿಳಿಸಿದ್ರು. ಕಾರ್ಯಕ್ರಮದಲ್ಲಿ ಎಡಿಸಿ ಪುಷ್ಪಲತಾ, ಎಎಸ್ಪಿ ಸೇರಿದಂತೆ ಇತರ ಅಧಿಕಾರಿಗಳು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ರು.