ರಾಷ್ಟ್ರವ್ಯಾಪಿ ಕಾರ್ಮಿಕ ಸಂಘಟನೆಗಳಿಂದ ಮುಷ್ಕರ... ತುಮಕೂರಿನಲ್ಲಿ ನೀರಸ ಪ್ರತಿಕ್ರಿಯೆ - ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ವಿರುದ್ಧ ತುಮಕೂರಿನಲ್ಲಿ ನೀರಸ ಪ್ರತಿಕ್ರಿಯೆ
ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ತುಮಕೂರು ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ಬೆಳಗ್ಗೆಯಿಂದಲೇ ಆಟೋಗಳ ಸಂಚಾರ, ಖಾಸಗಿ ಬಸ್ಸುಗಳ ಸಂಚಾರ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳ ಸಂಚಾರದಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಿಲ್ಲ. ಅಲ್ಲದೆ ನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಎಲ್ಐಸಿ ನೌಕರರ ಸಂಘಟನೆ, ಬಿಎಸ್ಎನ್ಎಲ್ ನೌಕರರ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳ ಸದಸ್ಯರು ಬೃಹತ್ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ.