ಜನರ ರಕ್ಷಣೆಗೆ ಹೋದ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿದ್ರು: ಮುಂದೇನಾಯ್ತು ಗೊತ್ತಾ..? - ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ನೂರಾರು ಜನರ ರಕ್ಷಣೆಗೆ ತೆರಳಿ, ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಒರ್ವ ಎನ್ಡಿಆರ್ಎಫ್, ಅಗ್ನಿಶಾಮಕ ಸಿಬ್ಬಂದಿ ಮತ್ತು ಮೂರು ಜನ ಸಿವಿಲ್ ಡಿಫೆನ್ಸ್ ಸಿಬ್ಬಂದಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕೊಚ್ಚಿ ಹೋಗಿದ್ದ ಐವರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ತಿಳಿಸಿದ್ದಾರೆ. ತುಂಗಭದ್ರಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಟ್ಟ ಪರಿಣಾಮ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿ ನೂರಾರು ಜನರು ಸಿಲುಕಿಕೊಂಡಿದ್ದರು. ರೆಸ್ಕ್ಯೂ ಕಾರ್ಯಕ್ಕೆ ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಸೂಗನಗೌಡ, ಸಿವಿಲ್ ಡಿಫೆನ್ಸ್ ಸಿಬ್ಬಂದಿಗಳಾದ ಚೇತನ್, ಗೌತಮ್ ಹಾಗೂ ಎನ್ಡಿಆರ್ಎಫ್ನ ಪ್ರೀತಂ ಅವರು ಬೋಟ್ ಮಗುಚಿಬಿದ್ದು ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದರು.
Last Updated : Aug 12, 2019, 5:19 PM IST