ನದಿಗೆ ಹಾರಿ ಆತ್ಮಹತ್ಯೆ ಮಾಡ್ಕೊಂಡ ನವ ದಂಪತಿಗಳು! - ಮೌನೇಶ ಕಂಬಾರ(28) ಹಾಗೂ ಅಕ್ಷತಾ ಕಂಬಾರ (25)
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಚಿಂಚಖಂಡಿ ಸೇತುವೆ ಬಳಿ ನೂತನವಾಗಿ ಮದುವೆಯಾದ ದಂಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಮೌನೇಶ ಕಂಬಾರ(28) ಹಾಗೂ ಅಕ್ಷತಾ ಕಂಬಾರ (25) ಘಟಪ್ರಭಾ ನದಿಗೆ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಡೆತ್ ನೋಟ್ ದೊರೆತಿದ್ದು ನಮ್ಮ ಸಾವಿಗೆ ನಾವೇ ಕಾರಣ ಎಂದು ಬರೆದಿಟ್ಟು ಸಾವಿಗೆ ಶರಣಾನಾಗಿದ್ದಾರೆ ಎನ್ನಲಾಗಿದೆ. ಮೃತ ದೇಹಕ್ಕಾಗಿ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮೀನುಗಾರರು ಶೋಧನಾ ಕಾರ್ಯ ಕೈಗೊಂಡಿದ್ದಾರೆ. ಮೃತರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಮಕೇರಿ ಗ್ರಾಮದವರು ಎಂದು ತಿಳಿದು ಬಂದಿದೆ.