ಮುಂದಿನ ಐದು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಮಳೆ: ಹವಾಮಾನ ಇಲಾಖೆ - ಬೆಂಗಳೂರಿನಲ್ಲಿ ಮಳೆ,
ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ವರದಿ ನೀಡಿದೆ. ಇಂದು ಸಂಜೆ ವೇಳೆಗೆ ಬೆಂಗಳೂರಿಗೆ ಮಳೆರಾಯ ಎಂಟ್ರಿ ಕೊಟ್ಟಿದ್ದು, ಮುಂದಿನ ಐದು ದಿನಗಳವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತವರಣ ನಿರ್ಮಾಣವಾಗಿತ್ತು. ಸಾಯಂಕಾಲದ ವೇಳೆಗೆ ಮಳೆ ಸುರಿದಿದೆ. ಅಲ್ಲದೆ ಕಳೆದ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸಾಧಾರಣ ಮಳೆಯಾಗ್ತಿದ್ದು, ಬೈಕ್ ಸವಾರರು ಪರದಾಡುವಂತಾಗಿದೆ.