ರಾಯಚೂರಿಗರಿಗೆ ತಟ್ಟಿದೆಯಾ ಬಂದ್ ಬಿಸಿ.... ಹೇಗಿದೆ ಜನಜೀವನ? - No support for Karnataka Bandh in Raichur
ರಾಯಚೂರು: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಯಚೂರು ಜಿಲ್ಲೆಯಲ್ಲಿ ಯಾವುದೇ ಬೆಂಬಲ ಸಿಕ್ಕಿಲ್ಲ. ಎಂದಿನಂತೆ ಜನ ಜೀವನ ಸಾಗಿದ್ದು, ಅಂಗಡಿ-ಮುಂಗಟ್ಟು, ವ್ಯಾಪಾರ ವಹಿವಾಟು ಮುಂದುವರೆದಿದೆ. ಬಸ್ ಸಂಚಾರದಲ್ಲೂ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ. ಅಲ್ಲದೇ ಜಿಲ್ಲೆಯ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಿಲ್ಲ.