ಶಿವಮೊಗ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಬಂದ್: ಪ್ರತ್ಯಕ್ಷ ವರದಿ
ಕೆಎಸ್ಆರ್ಟಿಸಿ ನೌಕರರು 6ನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಕೆಎಸ್ಆರ್ಟಿಸಿ ಬಸ್ ಸಂಚರಿಸುತ್ತಿಲ್ಲ. ಪ್ರತಿದಿನ ಶಿವಮೊಗ್ಗ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಸಾಕಷ್ಟು ಬಸ್ಗಳು ಬಂದು ಹೋಗುತ್ತವೆ. ಆದರೆ ಇಂದು ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಬಸ್ ನಿಲ್ದಾಣದಲ್ಲಿ ಬಸ್ಗಳೇ ಇಲ್ಲದೇ ಬಿಕೋ ಎನ್ನುತ್ತಿದೆ.