ಚಿತ್ರದುರ್ಗಕ್ಕೆ ತಟ್ಟದ ಬಂದ್ ಬಿಸಿ... ವಾಹನ ಸಂಚಾರ, ಜನಜೀವನ ಯಥಾಸ್ಥಿತಿ - No Karnatak band in Chitradurga,
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಬಿಸಿ ಚಿತ್ರದುರ್ಗಕ್ಕೆ ತಟ್ಟಿಲ್ಲ. ನಗರದಲ್ಲಿ ಎಂದಿನಂತೆ ವಾಹನ ಸಂಚಾರ ಆರಂಭವಾಗಿದ್ದು, ಕೆಎಸ್ಆರ್ಟಿಸಿ, ಖಾಸಗಿ ಬಸ್ಗಳು, ಆಟೋ ಸಂಚಾರ ಆರಂಭವಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ಅವರು ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದಾರೆ. ಬಂದ್ ಮಾಡಲು ಕನ್ನಡ ಪರ ಸಂಘಟನೆಗಳು ಮುಂದಾಗದ ಕಾರಣ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿಲ್ಲ. ಎರಡ್ಮೂರು ಕಾರ್ಮಿಕ ಸಂಘಟನೆಗಳು ಹಾಗೂ ಅಂಬೇಡ್ಕರ್ ಸಂಘಟನೆ ಬೆ. 10 ಗಂಟೆ ಬಳಿಕ ಪ್ರತಿಭಟಿಸುವ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿವೆ ಎಂದು ತಿಳಿದುಬಂದಿದೆ.