ಕೆಎಸ್ಆರ್ಟಿಸಿ ಬಸ್ಸುಗಳಿಲ್ಲದೇ ಪ್ರಯಾಣಿಕರ ಪರದಾಟ: ವಿರಳ ಸಂಚಾರದಲ್ಲಿ ಬಿಎಂಟಿಸಿ - Corona effect
ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆ ಬೆಂಗಳೂರಿನಲ್ಲಿ ಕೆಎಸ್ಆರ್ಟಿಸಿ, ಮೆಟ್ರೊ, ರೈಲು ಸೇವೆ ಸ್ತಬ್ಧವಾಗಿದೆ. ಬಿಎಂಟಿಸಿ ಕೆಲ ಬಸ್ ಗಳು ಮಾತ್ರ ಸಂಚಾರ ಮಾಡುತ್ತಿದ್ದು, ಪ್ರಯಾಣಿಕರೇ ಇಲ್ಲದಂತಾಗಿದೆ. ಇನ್ನೊಂದೆಡೆ ಕೆಎಸ್ಆರ್ಸಿ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದ್ದು, ಬಸ್ ಬರುವ ನಿರೀಕ್ಷೆಯಲ್ಲಿ ಪ್ರಯಾಣಿಕರು ಕಾದು ಕುಳಿತಿದ್ದಾರೆ. ಇಂದಿನಿಂದ ಬಿಎಂಟಿಸಿಯ ಎಲ್ಲಾ ಹವಾನಿಯಂತ್ರಣ ಬಸ್ ಗಳ ಕಾರ್ಯಾಚರಣೆ ಸ್ಥಗಿತವಾಗಿದ್ದು, ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.