ಸೋಂಕು ತಪಾಸಣಾ ಕೇಂದ್ರದ ಸಿಬ್ಬಂದಿಗಿಲ್ಲ ಮಾಸ್ಕ್; ಇದು ಆರೋಗ್ಯ ಇಲಾಖೆ ನಿರ್ಲಕ್ಷ್ಯ - Raichur corona news
ರಾಯಚೂರು ನಗರದಲ್ಲಿ ಕೊರೊನಾ ಸೋಂಕು ತಪಾಸಣೆ ಕೇಂದ್ರದ ಸಿಬ್ಬಂದಿಗೆ ಮಾಸ್ಕ್ ವಿತರಿಸಲು ಆರೋಗ್ಯ ಇಲಾಖೆ ವಿಫಲವಾಗಿದೆ. ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಳೆದ ಭಾನುವಾರದಿಂದ ಕೆಲಸಕ್ಕೆ ನಿಯೋಜಿಸಿರುವ ಸಿಬ್ಬಂದಿಗೆ ಮಾಸ್ಕ್ ವಿತರಿಸದೇ ಕರ್ತವ್ಯ ನಿರತ ಸಿಬ್ಬಂದಿಯ ಆರೋಗ್ಯದ ಬಗ್ಯೆ ಆರೋಗ್ಯ ಇಲಾಖೆ ನಿರ್ಲಕ್ಷ್ಯ ವಹಿಸಿರುವಂತೆ ಕಂಡು ಬರುತ್ತಿದೆ. ಈ ಬಗ್ಗೆ ಕರ್ತವ್ಯನಿರತ ಸಿಬ್ಬಂದಿ ಸಂಬಂಧಿಸಿದ ಅಧಿಕಾರಿಗಳಲ್ಲಿ ಮಾಸ್ಕ್ ನೀಡುವಂತೆ ಕೇಳಿದ್ರೂ ನೀಡುತ್ತಿಲ್ಲವಂತೆ. ಕೇಳಿದ್ರೆ ಮಾಸ್ಕ್ ಇಲ್ಲ ಎನ್ನುವ ಮಾತುಗಳನ್ನ ಹೇಳುತ್ತಿದ್ದಾರೆ ಅಂತಾರೆ ಕರ್ತವ್ಯ ನಿರತ ಅಧಿಕಾರಿಗಳು.