ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಎನ್ಎಸ್ಯುಐ ಪ್ರತಿಭಟನೆ - ಸಹ್ಯಾದ್ರಿ ಕಾಲೇಜು
ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್ಎಸ್ಯುಐ ಕಾರ್ಯಕರ್ತರು ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಮರ್ಪಕ ಹಾಸ್ಟೆಲ್ ಸೌಲಭ್ಯ ಇಲ್ಲದೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಶಿಫಾರಸ್ಸು ಮಾಡಿದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಇದರಿಂದಾಗಿ ಬಡ ವಿದ್ಯಾರ್ಥಿನಿಯರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.