ಪರಮೇಶ್ವರ್ ನಾಯ್ಕ್ ಪುತ್ರನ ವಿವಾಹದಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗಿದ್ದರೆ ಕ್ರಮ: ಬೊಮ್ಮಾಯಿ - ದಾವಣಗೆರೆ ರಾಜಕೀಯ ಸುದ್ದಿ
ದಾವಣಗೆರೆ: ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದ ಪಿ. ಟಿ. ಪರಮೇಶ್ವರ್ ನಾಯ್ಕ್ ಪುತ್ರನ ಅದ್ಧೂರಿ ಮದುವೆಯಲ್ಲಿ ಕೋವಿಡ್ 19 ಮಾರ್ಗಸೂಚಿ ಉಲ್ಲಂಘನೆ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಅಲ್ಲಿನ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಾರೆ. ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಿದ್ದಾರೆ. ಎಫ್ಐಆರ್ ಆದ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.