ಆನೇಕಲ್ ಉಪವಿಭಾಗದ ಪೊಲೀಸರ ಭರ್ಜರಿ ಕಾರ್ಯಾಚರಣೆ: ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಕೊಂಡ ಖಾಕಿ - ಹೆಬ್ಬಗೋಡಿ ಠಾಣೆ
ಮೆಟ್ರೋ ಸ್ಟೇಷನ್ಗಳಲ್ಲಿ ನಿಲ್ಲಿಸುವಂತಹ ಬುಲೆಟ್ಗಳನ್ನು ಕ್ಷಣಾರ್ಧದಲ್ಲಿ ಕಳ್ಳತನ ಮಾಡಿಕೊಂಡು ಎಸ್ಕೇಪ್ ಆಗುತ್ತಿದ್ದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬೆನ್ನುಹತ್ತಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆನೇಕಲ್ ಉಪವಿಭಾಗದ ಪೊಲೀಸರು ಚಿನ್ನ, ಬೈಕ್, ರಕ್ತಚಂದನ ಸೇರಿದಂತೆ ಒಂದು ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಿಕೊಂಡಿದ್ದಾರೆ.