ಬಜೆಟ್ನಲ್ಲಿ ಮಹಿಳೆಯರ ಕಡೆಗಣನೆ ಆರೋಪ: ಕಾರವಾರದಲ್ಲಿ ಜೈಲ್ ಭರೋ ಹೋರಾಟ - ಕಾರವಾರ ಸುದ್ದಿ
ಕಾರವಾರ: ರಾಜ್ಯ ಬಜೆಟ್ನಲ್ಲಿ ಮಹಿಳೆಯರನ್ನ ಕಡೆಗಣಿಸಲಾಗಿದೆ ಎಂದು ಆರೋಪಿಸಿ ಮತ್ತು ನಿಗದಿತ ಕೂಲಿ ನೀಡುವುದು ಸೇರಿದಂತೆ ಇನ್ನಿತರ ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಜೈಲ್ ಭರೋ ಹೋರಾಟ ನಡೆಸಲಾಯಿತು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್, ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ಹಾಗೂ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದ ಮಾಲಾದೇವಿ ಮೈದಾನದಿಂದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ರು.