ತುಂಬಿ ಹರಿಯುತ್ತಿರುವ ಕುಮದ್ವತಿ: ಕೆಲವು ಗ್ರಾಮಗಳ ಸಂಪರ್ಕ ಕಡಿತ - Kumadwati river
ಹಾವೇರಿ: ಕುಮದ್ವತಿ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಕೆಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಎಲಿವಾಳ ಮತ್ತು ಹಿರೇಮೊರಬ ಸೇತುವೆ ಮುಳುಗಿದ್ದರಿಂದ ರಟ್ಟೀಹಳ್ಳಿ ತಾಲೂಕಿನ ಹಿರೇಮೊರಬ, ಚಿಕ್ಕಮೊರಬ, ಎಲಿವಾಳ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಇನ್ನು ಸೇತುವೆ ಪಕ್ಕದ ಸಾವಿರಾರು ಎಕರೆ ಜಮೀನಿಗೆ ನೀರು ನುಗ್ಗಿದ್ದರಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.