ಬಳ್ಳಾರಿ: ಭತ್ತದ ಬಣವೆಗೆ ಬೆಂಕಿ ತಗುಲಿ ಲಕ್ಷಾಂತರ ರೂ ಮೌಲ್ಯದ ಬೆಳೆ ನಾಶ - ಭತ್ತದ ಬಣವೆಗೆ ಬೆಂಕಿ
ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ ಭತ್ತದ ಬಣವೆಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಬೆಳೆ ನಷ್ಟವಾಗಿರುವ ಘಟನೆ ನಡೆದಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿರಬಹುದು ಎನ್ನಲಾಗಿದ್ದು, ಸ್ಥಳೀಯ ಯುವಕರು ನೀರೆರಚಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.