'ಪೈಲ್ವಾನ್' ಗ್ರ್ಯಾಂಡ್ ಎಂಟ್ರಿ, ಕಲಬುರಗಿ, ಗದಗದಲ್ಲಿ ಅಭಿಮಾನಿಗಳ ಸಂಭ್ರಮ - ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು
ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಪೈಲ್ವಾನ್ ಕನ್ನಡ ಸಿನಿಮಾ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕಲಬುರಗಿಯಲ್ಲಿ ಶೆಟ್ಟಿ ಕಾಂಪ್ಲೆಕ್ಸ್ ಬಳಿ ಜಮಾಯಿಸಿದ್ದ ಅಭಿಮಾನಿಗಳು ಕಿಚ್ಚನ ಕಟೌಟ್ಗೆ ಕ್ಷೀರಾಭಿಷೇಕ ಮಾಡಿದ್ರು. ಥಿಯೇಟರ್ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಫ್ಯಾನ್ಸ್ ಚಿತ್ರಕ್ಕೆ ಶುಭ ಕೋರಿದ್ರು. ಇತ್ತ ಗದಗ ನಗರದ ವೆಂಕಟೇಶ ಚಿತ್ರಮಂದಿರದ ಮುಂಭಾಗ ಅಭಿಮಾನಿಗಳು ಪಟಾಕಿ ಸಿಡಿಸಿ ಖುಷಿ ಪಟ್ಟಿದ್ದಾರೆ.