ಬೆಳಗ್ಗೆಯಿಂದ ಕೇವಲ 12 ಬಸ್‌ಗಳ ಸಂಚಾರ: ಸ್ಯಾಟ್ಲೈಟ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ - ಬೆಂಗಳೂರು ಸಾರಿಗೆ ನೌಕರರ ಮುಷ್ಕರ
ಬೆಂಗಳೂರು : ಕಳೆದ 4 ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರದಿಂದಾಗಿ ಓಡಾಡಲು ಬಸ್‌ಗಳಿಲ್ಲದೇ ಪ್ರಯಾಣಿಕರು ಕಂಗಾಲಾಗಿದ್ದಾರೆ. ನಗರದ ಹಲವು ಮುಖ್ಯ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದು, ಸದಾ ಜನರಿಂದ ತುಂಬಿರುತ್ತಿದ್ದ ಮೈಸೂರು ರಸ್ತೆಯ ಸ್ಯಾಟ್ಲೈಟ್ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ಪ್ರಿಯಾಂಕ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ