ಮೆಕ್ಕೆಜೋಳಕ್ಕೆ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಹಾವೇರಿಯಲ್ಲಿ ರೈತರ ಪ್ರತಿಭಟನೆ
ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಹಾವೇರಿಯಲ್ಲಿ ರೈತ ಸೇನಾ ಕರ್ನಾಟಕ ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರೈತರು ದಲ್ಲಾಳಿಗಳಿಗೆ ಮಾರಿದ ನಂತರ ಸರ್ಕಾರ ಬೆಂಬಲ ಬೆಲೆ ನಿಗದಿ ಮಾಡುತ್ತೆ. ಇದರಿಂದ ವರ್ತಕರಿಗೆ ಲಾಭವೇ ಹೊರತು ರೈತರಿಗಲ್ಲ. ಮೆಕ್ಕೆಜೋಳ ರೈತರ ಬಳಿ ಇರುವಾಗಲೇ ಬೆಂಬಲ ಬೆಲೆ ಘೋಷಿಸುವಂತೆ ರೈತ ಮುಖಂಡರು ಒತ್ತಾಯಿಸಿದರು.