ದ.ಕ ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಬರುವವರ ಕುರಿತು ಆತಂಕ!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಾವಿರಾರು ಮಂದಿ ಮಹಾರಾಷ್ಟ್ರದಲ್ಲಿ ನೆಲೆಸಿದ್ದಾರೆ. ಮಹಾರಾಷ್ಟ್ರದಿಂದ ತವರಿಗೆ ಬರುವವರಿಂದ ಕೊರೊನಾ ಹೆಚ್ಚಳವಾಗುವ ಆತಂಕ ಸೃಷ್ಟಿಯಾಗಿದೆ. ಈವರೆಗೆ ಮಹಾರಾಷ್ಟ್ರದಿಂದ ಮಂಗಳೂರಿಗೆ ರೈಲು ಸಂಪರ್ಕ ಆರಂಭವಾಗಿಲ್ಲ. ನಿಸರ್ಗ ಚಂಡಮಾರುತದಿಂದ ಬರಬೇಕಾದ ರೈಲುಗಳು ರದ್ದಾಗಿವೆ. ಈಗಾಗಲೇ 1153 ಮಂದಿ ಬಂದಿದ್ದು, 1007 ಜನರಿಗೆ ಸಾಂಸ್ಥಿಕ ಕ್ವಾರಂಟೈನ್ ಮತ್ತು 146 ಹೋಂ ಕ್ವಾರಂಟೈನ್ ಮಾಡಲಾಗಿದೆ. ಈವರೆಗೆ ಮಹಾರಾಷ್ಟ್ರದಿಂದ ಬಂದವರಲ್ಲಿ 63 ಮಂದಿಗೆ ಕೊರೊನಾ ದೃಢಪಟ್ಟಿದೆ. ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರನ್ನು ಸಾಂಸ್ಥಿಕ ಕ್ವಾರಂಟೈನನ್ನಲ್ಲಿಡಲು ಸರ್ಕಾರ ಸಿದ್ದತೆ ನಡೆಸಿದೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.