ಹಸಿದ ಮೂಕ ಪ್ರಾಣಿಗಳಿಗೆ ಆಹಾರ ನೀಡಿ ಮಾನವೀಯತೆ ಮೆರೆದ ನಾಗರಿಕರು - ಹಸಿದ ಮೂಕ ಪ್ರಾಣಿಗಳಿಗೆ ಆಹಾರ ನೀಡಿ ಮಾನವೀಯತೆ ಮೆರೆದ ನಾಗರಿಕರು
ಮೈಸೂರು: ಕೋವಿಡ್-19 ಹಿನ್ನೆಲೆ ದೇಶವೇ ಲಾಕ್ಡೌನ್ ಆಗಿರುವುದರಿಂದ ಕೂಲಿ ಕಾರ್ಮಿಕರು, ಬಡವರು, ಅಸಂಘಟಿತ ವಲಯದವರು ದಿನೇ ದಿನೇ ಪರದಾಡುವಂತಾಗಿದೆ. ಇಂತಹ ಸಮಯದಲ್ಲಿ ಮೂಕ ಪ್ರಾಣಿಗಳ ವೇದನೆ ಕೂಡ ಹೆಚ್ಚಾಗುತ್ತಿದೆ. ಈ ಮೂಕ ಪ್ರಾಣಿಗಳಿಗೆ ಆಹಾರ ನೀಡುವುದು ನಾಗರಿಕರಿಗೂ ಒಂದು ರೀತಿಯ ಸವಾಲಿನ ಕೆಲಸವಾಗಿದೆ. ಹೀಗಾಗಿ ಚಾಮುಂಡಿ ಬೆಟ್ಟದ ಮೆಟ್ಟಲುಗಳ ಮೇಲೆ ಆಹಾರ ಸಿಗದೇ ಪರದಾಡುತ್ತಿದ್ದ ಕೋತಿ ಹಾಗೂ ಹಲವು ಪಕ್ಷಿಗಳಿಗೆ ಜನರು ಬಿಸ್ಕಟ್, ಹಾಲು ನೀಡಿ ಮಾನವೀಯತೆ ಮೆರೆದಿದ್ದಾರೆ.