ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಬ್ಯಾಂಕ್ ಮುಂದೆ ಮುಗಿಬಿದ್ದ ಜನರು..!
ಕೊಪ್ಪಳ: ಕುಷ್ಟಗಿ ಪಟ್ಟಣದ ಮುಖ್ಯರಸ್ತೆಯಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಮುಂದೆ ಜನರು ಹಣ ತೆಗೆದುಕೊಳ್ಳಲು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಮುಗಿಬಿದ್ದಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಬ್ಯಾಂಕ್ ಸಿಬ್ಬಂದಿ ಬಾಕ್ಸ್ ರಚಿಸಿದ್ರೂ ಜನರು ಅದನ್ನ ಪಾಲಿಸುತ್ತಿಲ್ಲ.