ಕೊರೊನಾ ಸೋಂಕಿನ ಬಗ್ಗೆ ಜನಜಾಗೃತಿ ಅಗತ್ಯ: ಸುದರ್ಶನ ಮೂಡುಬಿದಿರೆ - ಕೊರೊನಾ ಸೋಂಕು ಪತ್ತೆ
ಮಂಗಳೂರು: ಕೊರೊನಾ ಸೋಂಕು ತಡೆಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಂಡಿದ್ದು, ದ.ಕ.ಜಿಲ್ಲಾಡಳಿತ, ಮಂಗಳೂರು ಮನಪಾ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳು ಕೂಡಾ ಸೂಕ್ತವಾಗಿ ಸ್ಪಂದಿಸುತ್ತಿವೆ. ಜಿಲ್ಲೆಯಲ್ಲಿ ಯಾವುದೇ ಕೊರೊನಾ ಸೋಂಕು ಪತ್ತೆಯಾಗದಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಹೇಳಿದರು.