ಕೋವಿಡ್ ನಿಯಮ ಗಾಳಿಗೆ ತೂರಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ!
ಮಂಡ್ಯ: ರಾಜ್ಯಾದ್ಯಂತ ಇಂದಿನಿಂದ 14 ದಿನಗಳ ಜನತಾ ಕರ್ಫ್ಯೂ ಹಿನ್ನಲೆಯಲ್ಲಿ ಜಿಲ್ಲೆಯ ಜನರು ಕೋವಿಡ್ ನಿಯಮ ಗಾಳಿಗೆ ತೂರಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿರುವ ಮಾರುಕಟ್ಟೆಗಳಲ್ಲಿ ಮಾಸ್ಕ್ ಹಾಕದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದರು. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.