ಬೆಂಗಳೂರಿನ ಗಾಂಧಿ ಭವನದಲ್ಲಿ ಗಾಂಧೀಜಿ ಜೀವನಾಧಾರಿತ ಛಾಯಾಚಿತ್ರ ಪ್ರದರ್ಶನ - Photo exhibition in bengaluru
ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಾದೇಶಿಕ ಜನ ಸಂಪರ್ಕ ಕಾರ್ಯಾಲಯ, ಬೆಂಗಳೂರಿನ ಗಾಂಧಿ ಭವನದಲ್ಲಿ ಮಹಾತ್ಮ ಗಾಂಧಿಜಿ ಅವರ 150ನೇ ಜಯಂತಿ ಪ್ರಯುಕ್ತ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಿದೆ. ಗಾಂಧೀಜಿಯವರ ಜೀವನ ಆಧಾರಿತ ಛಾಯಾಚಿತ್ರ ಪ್ರದರ್ಶನ ಇಂದಿನಿಂದ ಅಕ್ಟೋಬರ್ 5ರವರೆಗೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿದರು. ಚಿತ್ರ ಪ್ರದರ್ಶನದಲ್ಲಿ ಮಹಾತ್ಮ ಗಾಂಧಿಯವರ ಜೀವನ, ಸಾಧನೆ ಕುರಿತ ಅಪರೂಪದ ಚಿತ್ರಗಳನ್ನು ಪ್ರದರ್ಶಿಸಲಾಗಿದೆ. ಗಾಂಧೀಜಿಯವರು ಭೇಟಿ ನೀಡಿದ ಸ್ಥಳಗಳು ಹಾಗೂ ಸತ್ಯಾಗ್ರಹಗಳ ಕುರಿತ ವಿಡಿಯೋ ತುಣುಕುಗಳ ಪ್ರದರ್ಶನ ಕೂಡ ಇದೆ.