'ಶಾಲೆಗೆ ಬರುವಾಗ ಪ್ಲಾಸ್ಟಿಕ್ ಬಾಟಲಿ ತರಲ್ಲ':ಧಾರವಾಡದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಜ್ಞೆ - Dharwad Plastic Awareness Program
ಧಾರವಾಡ : ಕೇಂದ್ರ ಸರಕಾರದ ಪ್ಲಾಸ್ಟಿಕ್ ನಿಷೇಧ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿ ಧಾರವಾಡದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಜೆ.ಎಸ್.ಎಸ್. ಕಾಲೇಜು ಆವರಣದಲ್ಲಿ ನಡೆದ ಅಭಿಯಾನದಲ್ಲಿ 15 ಸಾವಿರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜನತಾ ಶಿಕ್ಷಣ ಸಮಿತಿಯ ವಿತ್ತಾಧಿಕಾರಿ ಡಾ. ಅಜಿತ್ ಪ್ರಸಾದ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬಳಸದಂತೆ ಪ್ರತಿಜ್ಞಾವಿಧಿ ಬೋಧಿಸಿದ್ರು. ಶಾಲಾ, ಕಾಲೇಜಿಗೆ ಬರುವಾಗ ಪ್ಲಾಸ್ಟಿಕ್ ಬಾಟಲ್ ತರದಿರಲು ವಿದ್ಯಾರ್ಥಿಗಳು ನಿರ್ಧರಿಸಿದರು.