ಪ್ರಧಾನಿಯಾಗಿ ನಮೋ ಪದಗ್ರಹಣ... ರಾಜ್ಯದೆಲ್ಲೆಡೆ ಬಿಜೆಪಿ ಕಾರ್ಯಕರ್ತರ ಸಂಭ್ರಮ - ಪ್ರಧಾನಿಯಾಗಿ ನಮೋ ಪದಗ್ರಹಣ
ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರದ ಗದ್ದುಗೆಯೇರಿರುವ ನರೇಂದ್ರ ಮೋದಿ 2ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಿನ್ನೆ ನಡೆದ ಅದ್ಧೂರಿ ಸಮಾರಂಭದಲ್ಲಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಜ್ಞಾವಿಧಿ ಬೋಧಿಸಿದರು. ಅತ್ತ ನಮೋ ಪದಗ್ರಣ ಮಾಡುತ್ತಿದ್ದಂತೆ, ಇತ್ತ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು.