ಗುಟ್ಕಾ ಪ್ಯಾಕೇಟ್ ಕದ್ದು ಓಡಿ ಹೋಗುತ್ತಿದ್ದ ಕಳ್ಳನ ಬಂಧನ - undefined
ಹುಬ್ಬಳ್ಳಿ: ಕಳ್ಳತನ ಮಾಡಿಕೊಂಡು ಓಡಿ ಹೋಗುತ್ತಿದ್ದ ಕಳ್ಳನೊಬ್ಬ ರೆಡ್ ಹ್ಯಾಂಡ್ ಆಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬಿಡಿ ಅಂಗಡಿಯಲ್ಲಿದ್ದ ಸಾಮಾನುಗಳನ್ನ ಕದ್ದುಕೊಂಡು ಓಡಿ ಹೋಗುತ್ತಿದ್ದ. ಆಗ ಅನುಮಾನಗೊಂಡ ಪೊಲೀಸರು ಓಡಿ ಹೋಗುತ್ತಿದ್ದ ಕಳ್ಳನನ್ನು ಹಿಡಿದು ವಿಚಾರಣೆ ಮಾಡಿದಾಗ ಕಳ್ಳನ ಕೃತ್ಯ ಬಯಲಾಗಿದೆ. ಕದ್ದುಕೊಂಡು ಬಂದ ಬ್ಯಾಗ್ನಲ್ಲಿ ಪಾನ್ ಶಾಪ್ನಲ್ಲಿನ ಗುಟ್ಕಾ ಪ್ಯಾಕೇಟ್ ಮತ್ತು ಹಣ ಪತ್ತೆಯಾಗಿದೆ. ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.