ಅಯೋಧ್ಯೆ ತೀರ್ಪು: ಕಲ್ಪತರು ನಾಡಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ - ಅಯೋಧ್ಯಾ ತೀರ್ಪು
ತುಮಕೂರು: ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಪಟ್ಟಂತೆ ಮಹತ್ವದ ತೀರ್ಪಿನ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾದ್ಯಂತ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದು ಎಂದು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದೆ. ತುಮಕೂರು ನಗರದಲ್ಲಿ ಒಂದು ಕೆಎಸ್ಆರ್ಪಿ ಮತ್ತು ಶಿರಾ ಪಟ್ಟಣದಲ್ಲಿ ಒಂದು ಕೆಎಸ್ಆರ್ಪಿ ಪೊಲೀಸ್ ತುಕಡಿಯನ್ನು ನಿಯೋಜನೆ ಮಾಡಲಾಗಿದೆ. ಇನ್ನುಳಿದಂತೆ ಪ್ರಮುಖ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.
TAGGED:
ಅಯೋಧ್ಯಾ ತೀರ್ಪು