ಮತಗಟ್ಟೆಗೆ ಯಾವುದೇ ಭಯವಿಲ್ಲದೇ ಬನ್ನಿ... ಅಗತ್ಯ ಭದ್ರತೆ ಮಾಡಲಾಗಿದೆ: ಎಸ್ಪಿ - ಪೊಲೀಸ್ ವರಿಷ್ಠಾಧಿಕಾರಿ
ಏಪ್ರಿಲ್ 23 ರಂದು ನಡೆಯಲಿರುವ ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವ್ಯಾಪಕ ಕ್ರಮಗಳನ್ನು ಕೈಗೊಂಡು ಸಜ್ಜಾಗಿದೆ. ಜಿಲ್ಲೆಯಲ್ಲಿರುವ ಮತಗಟ್ಟೆಗೆ ಸಿಬ್ಬಂದಿ ನೇಮಕ ಮಾಡಲಾಗುತ್ತಿದೆ. ಇದಕ್ಕಾಗಿ ಬೇರೆ ಜಿಲ್ಲೆಗಳಿಂದಲೂ ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಈಟಿವಿ ಭಾರತ್ಗೆ ತಿಳಿಸಿದ್ದಾರೆ