ರಾಜ್ಯಾದ್ಯಂತ ಲಾಕ್ಡೌನ್ ಹಿನ್ನೆಲೆ: ಗಡಿ ಭಾಗದಲ್ಲಿ ತೀವ್ರ ಕಟ್ಟೆಚ್ಚರ - Janta Curfew in India coronavirus news
ಅಥಣಿ: ರಾಜ್ಯಾದ್ಯಂತ ಲಾಕ್ಡೌನ್ ಜಾರಿಯಾದ ಹಿನ್ನೆಲೆ ತಾಲೂಕಿನ ಮಹಾರಾಷ್ಟ್ರ ಗಡಿ ಗ್ರಾಮಗಳಾದ ಕೊಟ್ಟಲಗಿ, ಬಾಳಿಗೇರಿ, ತೇಲಸಂಗ, ಕಾಗವಾಡ ಸೇರಿದಂತೆ ಹಲವೆಡೆ ಚೆಕ್ ಪೋಸ್ಟ್ಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿಯೊಂದು ಚೆಕ್ ಪೋಸ್ಟ್ಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರನ್ನು ನಿಯೋಜಿಸಲಾಗಿದ್ದು, ಎಲ್ಲರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.